ಸಿಂದಗಿ: ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

166

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ತಾಲೂಕಾ ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ಪಟ್ಟಣದ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.

ದೇವರ ಹಿಪ್ಪರಗಿಯಲ್ಲಿ ನಡೆದ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಇವರ ಸಾಧನೆಗೆ ಸಂಸ್ಥೆಯ ಮುಖ್ಯಸ್ಥರಾದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಪ್ರಾಚಾರ್ಯ ವಿಮಲಕಾಂತ ಪಾಟೀಲ, ಉಪಪ್ರಾಚಾರ್ಯ ಬಿ.ಎಂ ಸಿಂಗನಳ್ಳಿ, ಪಿ.ವಿ ಮಹಲಿನಮಠ, ಎನ್.ಬಿ.ಪೂಜಾರಿ, ಸುನೀಲ ಪಾಟೀಲ, ಸುಭಾಸ ಹೊಸಮನಿ, ಪ್ರಸನ್ನ ಜೋಗೂರ, ಎಸ್.ಎಸ್ ತಾಳಿಕೋಟಿ, ಬಿ.ಬಿ ಜಮಾದಾರ, ಶಿವರಾಜ ಕುಂದಗೋಳ, ಸಂಗಮೇಶ ಚಾವರ, ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!