ಪ್ರಜಾಸ್ತ್ರ ಸಿನಿಮಾ ಡೆಸ್ಕ್
ರಿಯಲ್ ಸ್ಟಾರ್ ಉಪೇಂದ್ರ, ಅಭಿನಯ ಚಕ್ರವರ್ತಿ ಸುದೀಪ್ ನಟನೆಯ ಕಬ್ಜ ಚಿತ್ರದ ಟೀಸರ್ ನಾಳೆ ರಿಲೀಸ್ ಆಗುತ್ತಿದೆ. ಹೀಗಾಗಿ ಇಬ್ಬರು ಸ್ಟಾರ್ ನಟರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿದೆ.
ಆರ್.ಚಂದ್ರು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚಿತ್ರದ ಬಗ್ಗೆ ಈಗಾಗ್ಲೇ ಹೈಪ್ ಕ್ರಿಯೇಟ್ ಆಗಿದೆ. ಕಬ್ಜ ಸಿನಿಮಾ ಕನ್ನಡ ಸೇರಿದಂತೆ ತಮಿಳು, ತೆಲುಗು, ಹಿಂದಿ, ಮಲಯಾಳಂ, ಮರಾಠಿ ಹಾಗೂ ಒರಿಯಾ ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ನಟಿ ಶ್ರೇಯಾ ಶರಣ್ ಕಾಣಿಸಿಕೊಂಡಿದ್ದಾರೆ. ರವಿ ಬಸ್ರೂರ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.