ಕಲಬುರಗಿಯಲ್ಲಿ ಉಮೇಶ್ ಜಾಧವ್ ಭರ್ಜರಿ ಮೆರವಣಿಗೆ

62

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಲೋಕಸಭಾ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಹೀಗಾಗಿ ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿಗಳ ಮರವಣಿಗೆ ಅದ್ಧೂರಿಯಾಗಿ ನಡೆಯುತ್ತಿವೆ. ಕಲಬುರಗಿ ಎಸ್ಸಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾದವ್ ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಇಂದು ನಾಮಪತ್ರ ಸಲ್ಲಿಸಿದ್ದು, ನಗರೇಶ್ವರ ಶಾಲಾ ಮುಂಭಾಗದಿಂದ ಮೆರವಣಿಗೆ ಪ್ರಾರಂಭವಾಯಿತು. ಸೂಪರ್ ಮಾರ್ಕೆಟ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಯತ್ತ ಸಾಗಿತು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ರಮೇಶ ಜಿಗಜಿಣಗಿ, ಮಾಜಿ ಶಾಸಕ ಪಿ.ರಾಜೀವ್, ಮಾಜಿ ಸಚಿವ ಅರವಿಂದ್ ಲಿಂಬಾವಳಿ ಸೇರಿ ಅನೇಕರು ಭಾಗವಹಿಸಿದ್ದರು.

ಮೆರವಣಿಗೆ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರ ಜೋಶ್ ಕಂಡು ಬಂತು. ಮತ್ತೊಮ್ಮೆ ಸಂಸದರಾಗಲು ಮುಂದಾಗಿರುವ ಉಮೇಶ್ ಜಾದವ್ ಅವರಿಗೆ ಠಕ್ಕರ್ ಕೊಡಲು ಕಾಂಗ್ರೆಸ್ ನಿಂದ ರಾಧಾಕೃಷ್ಣ ದೊಡ್ಡಮನಿ ಸ್ಪರ್ಧಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅಳಿಯನಾಗಿದ್ದು, ಜಿದ್ದಾಜಿದ್ದಿನ ಹೋರಾಟ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!