ರೈಲ್ವೆ ವಿಭಾಗದಲ್ಲೂ ಕಲಬುರಗಿಗೆ ಕೈ ಕೊಟ್ಟ ಕೇಂದ್ರ

245

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕರ್ನಾಟಕದ ಕಲಬುರಗಿ ಸೇರಿದಂತೆ ಮೂರು ಕಡೆ ರೈಲ್ವೆ ವಿಭಾಗ ಪ್ರಾರಂಭಿಸುವ ಪ್ರಸ್ತಾವನೆಯನ್ನ ಕೈ ಬಿಡಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ಈ ಮೂಲಕ ಕಲಬುರಗಿ ಜಿಲ್ಲೆಗೆ ಮತ್ತೊಮ್ಮೆ ಅನ್ಯಾಯ ಮಾಡಲಾಗಿದೆ ಅನ್ನೋ ಕೂಗು ಎದ್ದಿದೆ.

ಕಲಬುರಗಿ ಸಂಸದ ಡಾ.ಉಮೇಶ ಜಾಧವ ಕೇಳಿದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಉತ್ತರಿಸಿದ ಕೇಂದ್ರ ಸಚಿವರು, ಹಣಕಾಸು, ಕಾರ್ಯಾಚರಣೆ ಹಾಗೂ ಆಡಳಿತಾತ್ಮಕ ಸೇರಿದಂತೆ ಹಲವು ವಿಚಾರಗಳಿಗೆ ಪ್ರಸ್ತಾವನೆ ಕೈ ಬಿಡಬೇಕು ಎಂದು ಹಿರಿಯ ರೈಲ್ವೆ ಅಧಿಕಾರಿಗಳ ತಂಡ ವರದಿ ನೀಡಿದೆ ಎಂದಿದ್ದಾರೆ.

ಯುಪಿಎ ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಕಲಬುರಗಿಯಲ್ಲಿ ರೈಲ್ವೆ ವಿಭಾಗ ಪ್ರಾರಂಭಿಸುವ ಬಗ್ಗೆ ಬಜೆಟ್ ನಲ್ಲಿ ಘೋಷಿಸಿದ್ದರು. ಆದ್ರೆ, ಕಲಬುರಗಿ ಕೈ ಬಿಟ್ಟಿರುವ ಕೇಂದ್ರ ಸರ್ಕಾರ ಮಹಾರಾಷ್ಟ್ರದ ರಾಯಗಡದಲ್ಲಿ ರೈಲ್ವೆ ವಿಭಾಗ ಸ್ಥಾಪನೆ ಕಾಮಗಾರಿ ನಡೆಸಿದೆ.




Leave a Reply

Your email address will not be published. Required fields are marked *

error: Content is protected !!