ಕಲ್ಯಾಣ ಕರ್ನಾಟಕ ಸರ್ವತೋಮುಖ ಅಭಿವೃದ್ಧಿಗೆ ಸಿದ್ಧ: ಸಿಎಂ

319

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಇಂದು ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಗ್ತಿದೆ. ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾತ್ನಾಡಿದ್ರು. ಅವರ ಭಾಷಣದ ಪ್ರಮುಖ ಅಂಶಗಳು ಇಲ್ಲಿವೆ ನೋಡಿ.

ನಮ್ಮ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಹೈದ್ರಾಬಾದ್ ಕರ್ನಾಟಕವನ್ನ ಕಲ್ಯಾಣ ಕರ್ನಾಟಕವೆಂದು ನಾಮಕರಣ ಮಾಡಿದ್ದೇವೆ. ಪ್ರಾದೇಶಿಕ ಅಸಮತೋಲನ ನಿವಾರಣೆ ಮಾಡುವ ಸಲುವಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಗಿದೆ. ಇದು ಈ ಭಾಗದ ಸಂಪೂರ್ಣ ಅಭಿವೃದ್ಧಿಯ ಕೆಲಸ ಮಾಡುತ್ತಿದೆ ಎಂದರು.

ಈ ಭಾಗದ ಅಭಿವೃದ್ಧಿಗೆ ಒತ್ತು ನೀಡುವುದು ನಮ್ಮ ಆದ್ಯತೆಯಾಗಿದೆ. ಕೃಷಿ, ಶಿಕ್ಷಣ, ಆರೋಗ್ಯ, ಸ್ವಯಂ ಉದ್ಯೋಗ, ಯುವ ಜನ ಹಾಗೂ ಮಹಿಳಾ ಸಬಲೀಕರಣ, ಗ್ರಾಮ ಸಬಲೀಕರಣ ಸಾಧಿಸುವ ಮೂಲಕ ಈ ಭಾಗದ ಜನರ ಬೇಡಿಕೆಗಳನ್ನ ಈಡೇರಿಸಲಾಗ್ತಿದೆ. ಇದಕ್ಕಾಗಿ ಕೃಷಿ ಮತ್ತು ಸಾಂಸ್ಕೃತಿಕ ಸಂಘಕ್ಕೆ 30 ಕೋಟಿ ಬಿಡುಗಡೆಗೆ ಅನುಮೋದನೆ ನೀಡಿ 100 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದರು.

ಕಲಬುರಗಿ-ಬೀದರ ಜಿಲ್ಲೆಗೆ ಉಪಯೋಗವಾಗುವ ದೃಷ್ಟಿಯಿಂದ 3 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಯೋಜನೆ, ಕಾಗಿಣಾ ನದಿಗೆ ಹೊಂದಿಕೊಂಡತೆ 10 ಏತ ನೀರಾವರಿ ಯೋಜನೆಗೆ ಅನುಮೋದನೆ. ರಾಯಚೂರಿನ ಗೋಲಪಲ್ಲಿಯಲ್ಲಿ 1,200 ಮೆಗಾ ವ್ಯಾಟ್ ಸಾಮರ್ಥ್ಯದ 10 ಸಾವಿರ ಕೋಟಿ ವೆಚ್ಚದ ಜಲ ವಿದ್ಯುತ್ ಯೋಜನೆ ಪರಿಶೀಲನೆ ಹಂತದಲ್ಲಿದೆ. ಬಸವಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆ. ಒಟ್ಟಾರೆಯಾಗಿ ಕಲ್ಯಾಣ ಪ್ರದೇಶ ವ್ಯಾಪ್ತಿಯ ಕಲಬುರಗಿ, ಬೀದರ, ಕೊಪ್ಪಳ, ಯಾದಗಿರಿ, ರಾಯಚೂರು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸಿದ್ಧ ಎಂದರು.




Leave a Reply

Your email address will not be published. Required fields are marked *

error: Content is protected !!