ಸಿಂದಗಿಯಲ್ಲೆಡೆ ಕನಕದಾಸ ಜಯಂತಿ ಆಚರಣೆ

560

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಪಟ್ಟಣದ ಎಲ್ಲೆಡೆ ದಾಸಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಶಾಸಕ ಅಶೋಕ ಮನಗೂಳಿ, ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಸಿಪಿಐ ಡಿ.ಹುಲಿಗೆಪ್ಪ, ಕುರುಬ ಸಮಾಜದ ಅಧ್ಯಕ್ಷ ನಿಂಗಣ್ಣ ಬಿರಾದಾರ ಸೇರಿ ಅನೇಕರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ಪರಿಷತ್ತು ಸಭಾ ಭವನದಲ್ಲಿ ಕನಕದಾಸರ ಜಯಂತಿ ಆಚರಿಸಲಾಯಿತು. ಕಸಾಪ ಅಧ್ಯಕ್ಷ ಶಿವಾನಂದ ಬಡಾನೂರ, ಮಾಜಿ ಅಧ್ಯಕ್ಷ ಚಂದ್ರಶೇಖರ ದೇವರೆಡ್ಡಿ, ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಕಾನಿಪ ಅಧ್ಯಕ್ಷ ಆನಂದ ಶಾಬಾದಿ ಸೇರಿ ಇತರರು ಗೌರವ ಅರ್ಪಿಸಿದರು. ಇದೇ ಸಂದರ್ಭದಲ್ಲಿ ಕಸಾಪ ವಿವಿಧ ಪದಾಧಿಕಾರಿಗಳಿದ್ದರು.

ಇನ್ನು ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಆರ್.ಡಿ ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ತತ್ವಜ್ಞಾನಿ ಕನಕದಾಸರ 536ನೇ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!