ಕನ್ಹಯ್ಯ ಹತ್ಯೆ ಖಂಡಿಸಿ ಪ್ರತಿಭಟನೆ

313

ಪ್ರಜಾಸ್ತ್ರ ಸುದ್ದಿ

ಸಿಂದಗಿ: ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯ ಅನ್ನೋ ಟೈಲರ್ ನ್ನು ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ಸಿಂದಗಿ ಪಟ್ಟಣದ ಬಸವೇಶ್ವರ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಯಿತು. ವಿಶ್ವ ಹಿಂದು ಪರಿಷತ್, ಭಜರಂಗದಳ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು.

ಕನ್ಹಯ್ಯ ಲಾಲ್ ಹತ್ಯೆಯನ್ನು ಖಂಡಿಸಿ, ಹತ್ಯೆಯ ಹಂತಕರಿಗೆ ಉಗ್ರವಾದ ಶಿಕ್ಷೆಯನ್ನು ಕೊಡಬೇಕೆಂದು ಆಗ್ರಹಿಸಿದರು. ಭಯೋತ್ಪಾದಕರ ರೀತಿಯಲ್ಲಿ ಪೈಶಾಚಿಕ ಕೃತ್ಯವೆಸಗಿರುವ ಆರೋಪಿಗಳಿಬ್ಬರನ್ನು ಕೂಡಲೇ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. ಈ ವೇಳೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಬಿಜೆಪಿ ಮುಖಂಡರು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!