ಕನ್ಹಯ್ಯ ಹತ್ಯೆ ಹಿಂದೆ ಅಂತಾರಾಷ್ಟ್ರೀಯ ಷಡ್ಯಂತ್ರ

271

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಉದಯಪುರದಲ್ಲಿ ನಡೆದ ಘಟನೆ ಅಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದೊಂದು ರೀತಿಯ ಭಯೋತ್ಪಾದನೆಯ ಕೃತ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಕೃತ್ಯದ ಹಿಂದೆ ಅಂತಾರಾಷ್ಟ್ರೀಯ ಷಡ್ಯಂತ್ರವಿದೆ. ಇದರ ಬಗ್ಗೆ ಸೂಕ್ತ ತನಿಖೆಯಾಗಬೇಕು. ಜೊತೆಗೆ ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗಬೇಕು. ಇದಕ್ಕೆ ರಾಜಸ್ಥಾನ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಜರುಗಿಸಬೇಕು. ಇದರ ಹಿಂದೆ ಅಂತಾರಾಷ್ಟ್ರೀಯ ಭಯೋತ್ಪಾದನಾ ಸಂಸ್ಥೆಗಳಿವೆ. ಇದರ ಬಗ್ಗೆ ತನಿಖೆಯಾಗಬೇಕು ಎಂದರು.




Leave a Reply

Your email address will not be published. Required fields are marked *

error: Content is protected !!