ಕಲಾತಪಸ್ವಿ ರಾಜೇಶ್ ನಿಧನ

227

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ರಾಜೇಶ್ ಶನಿವಾರ ಮುಂಜಾನೆ ನಿಧನರಾಗಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ಮತ್ತೊಬ್ಬ ಕಲಾವಿದನನ್ನು ಕಳೆದುಕೊಂಡಿದೆ. 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಜನಮನ್ನಣೆ ಗಳಿಸಿದವರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.

ಹಿರಿಯ ನಟ ರಾಜೇಶ್ ನಿಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು, ಬಂಧುಮಿತ್ರರು ಸಂತಾಪ ಸೂಚಿಸಿದ್ದಾರೆ. ಇನ್ನು ರಾಜೇಶ್ ಪುತ್ರಿ ಆಶಾರಾಣಿಯು ನಟಿಯಾಗಿ ಮಿಂಚಿದವರು. ಇವರ ಪತಿ ಅರ್ಜುನ್ ಸರ್ಜಾ ಸೌಥ್ ಸಿನಿ ದುನಿಯಾದ ಸ್ಟಾರ್ ನಟ, ನಿರ್ದೇಶಕ, ನಿರ್ಮಾಪಕ.

ಇವರ ಇಡೀ ಕುಟುಂಬ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದೆ. 1960ರ ದಶಕದಲ್ಲಿ ಚಿತ್ರರಂಗಕ್ಕೆ ಬಂದ ರಾಜೇಶ್ ಕಲಾತಪಸ್ವಿ ಎಂದೇ ಖ್ಯಾತಿ ಗಳಿಸಿದವರು. ಫೆಬ್ರವರಿ 25ರಂದು ಬಿಡುಗಡೆಯಾಗಲಿರುವ ಓಲ್ಡ್ ಮಾಂಕ್ ಚಿತ್ರದಲ್ಲಿ ನಟಿಸಿರುವುದು ಇವರ ಕೊನೆಯ ಚಿತ್ರವಾಗಿದೆ.




Leave a Reply

Your email address will not be published. Required fields are marked *

error: Content is protected !!