ಕನ್ನಡದ ನಟಿ ನೇಣಿಗೆ ಶರಣು

305

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಸ್ಯಾಂಡಲ್ ವುಡ್ ಕಿರುತರೆ ನಟಿ ಸೌಜನ್ಯ(25) ನೇಣು ಹಾಕಿಕೊಂಡು ಆತ್ಮಹತ್ಯೆ ಗುರುವಾರ ಮಾಡಿಕೊಂಡಿದ್ದಾರೆ. ಸನ್ ವರ್ತ್ ಅಪಾರ್ಟ್ ಮೆಂಟ್ ನಲ್ಲಿ ನಟಿಯ ಮೃತದೇಹ ಪತ್ತೆಯಾಗಿದೆ. ಅನಾರೋಗ್ಯದಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ.

ಕೊಡಗು ಜಿಲ್ಲೆ ಕುಶಾಲನಗರದ ಸೌಜನ್ಯ, ಹಲವು ಧಾರವಾಹಿಗಳಲ್ಲಿ ನಟಿಸಿದ್ದಾರೆ. ಚೌಕಟ್ಟು, ಫನ್ ಅನ್ನೋ ಸಿನಿಮಾಗಳಲ್ಲಿ ನಟಿಯಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡಬೆಲೆ ಗ್ರಾಮದ ಸನ್ ವರ್ತ್ ಅಪಾರ್ಟ್ ಮೆಂಟ್ ನಲ್ಲಿ ತನ್ನ ಬಾಯ್ ಫ್ರೆಂಡ್ ವಿವೇಕ್ ಜೊತೆ ವಾಸವಾಗಿದ್ದಳು.

ವಿವೇಕಗೆ ಊಟ ತರಲು ಹೇಳಿದ್ದಾಳೆ. ಅವನು ಹೊರಗೆ ಹೋದ್ಮೇಲೆ ಡೆತ್ ನೋಟ್ ಬರೆದಿಟ್ಟು ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಾವಿಗೆ ಏನು ಕಾರಣ ಅನ್ನೋದರ ತನಿಖೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!