ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

308

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2020ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ 15 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು.

ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್ಎಸ್ಎಲ್ ಸಿ ಪ್ರಮಾಣ ಪತ್ರದ ಪ್ರತಿ ಅಥವ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿ ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿಟಿಪಿ. ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ, ಸ್ನಾತಕೋತ್ತರ ಪದವಿ(ಪಿಎಚ್ ಡಿ)ಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನ ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದ ಹಸ್ತಪ್ರತಿ ಇರಬೇಕು.

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 20, 2021 ಆಗಿರುತ್ತದೆ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು–560002 ಇಲ್ಲಿಗೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ 080-22484516 / 22107704ಗೆ ಸಂಪರ್ಕಿಸಬಹುದು.




Leave a Reply

Your email address will not be published. Required fields are marked *

error: Content is protected !!