ಎಲ್ಲೆಲ್ಲೂ ಕನ್ನಡದ ಕಂಪು

172

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮ ಸಡಗರ ಮನೆ ಮಾಡಿದೆ. 68ನೇ ಕನ್ನಡ ರಾಜ್ಯೋತ್ಸವವನ್ನು ಕನ್ನಡಿಗರೆಲ್ಲ ಸೇರಿಕೊಂಡು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ದೇಶ, ವಿದೇಶದಲ್ಲಿ ನೆಲೆಸಿರುವ ಕನ್ನಡಿಗರು ಸಹ ಕನ್ನಡದ ಹಬ್ಬ ನಡೆಸುತ್ತಿದ್ದಾರೆ.

ಇದರ ಜೊತೆಗೆ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವರ್ಷ ಪೂರ್ಣಗೊಂಡಿದೆ. ಈ ಸುವರ್ಣ ಸಂಭ್ರಮಕ್ಕೆ ಕಾರಣರಾದ ಎಲ್ಲ ಹೋರಾಟಗಾರರಿಗೆ, ಸತತವಾಗಿ ಕನ್ನಡದ ಸೇವೆಯನ್ನು ಮಾಡುತ್ತಿರುವ ಕನ್ನಡ ಮನಸ್ಸುಗಳಿಗೆ ಶುಭ ಕೋರಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!