ಹಿರಿಯ ನಟ ಅಶೋಕ್ ರಾವ್ ನಿಧನ

472

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್(75) ನಿಧನರಾಗಿದ್ದಾರೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು ಮನೆಯಲ್ಲಿಯೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಕಾಣಿಸಿಕೊಂಡ ಇವರು ಸುಮಾರು 250ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್, ಡಾ.ಅಂಬರೀಶ್, ದೇವರಾಜ್, ಶಿವರಾಜಕುಮಾರ್, ರವಿಚಂದ್ರನ್, ಮಾಲಾಶ್ರೀ, ಸುದೀಪ್, ಉಪೇಂದ್ರ ಸೇರಿದಂತೆ ಹಲವು ನಟ, ನಟಿಯರೊಂದಿಗೆ ಅಶೋಕ್ ರಾವ್ ಬಣ್ಣ ಹಚ್ಚಿದ್ದಾರೆ. ಪತ್ನಿ, ಮಗ ಹಾಗೂ ಮಗಳನ್ನು ಅಗಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!