ಠಾಕ್ರೆ ಹೇಳಿಕೆ ವಿರುದ್ಧ ಹೆಚ್ಚಾದ ಕನ್ನಡಿಗರ ಕಿಚ್ಚು

219

ಪ್ರಜಾಸ್ತ್ರ ಸುದ್ದಿ

ಬೆಂಗಳೂರು/ಬೆಳಗಾವಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ಹೆಚ್ಚಾಗಿದೆ. ರಾಜಕೀಯ ನಾಯಕರು, ಕನ್ನಡಪರ ಸಂಘಟನೆಗಳು ಸೇರಿದಂತೆ ಪ್ರತಿಯೊಬ್ಬರು ಕಿಡಿ ಕಾರುತ್ತಿದ್ದಾರೆ.

ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿಲಾಗಿದೆ. ಈ ವೇಳೆ ಠಾಕ್ರೆ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಲಾಗಿದ್ದು, ಬೆಳಗಾವಿ ಯಾವತ್ತಿದ್ದರೂ ಕರ್ನಾಟಕಕ್ಕೆ ಸೇರಿದ್ದು ಎಂದಿದ್ದಾರೆ.

ಇನ್ನು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಮೂಲಕ ಠಾಕ್ರೆಗೆ ತಕ್ಕ ಪಾಠ ಕಲಿಸುತ್ತೇವೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!