ಪ್ರಜಾಸ್ತ್ರ ಸುದ್ದಿ
ಸಿಂದಗಿ: ತಾಲೂಕಿನ ಕನ್ನೊಳ್ಳಿ ಗ್ರಾಮ ಪಂಚಾಯ್ತಿಯ ಚುನಾವಣೆ ಇತ್ತೀಚೆಗೆ ನಡೆದಿತ್ತು. ಇಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರಾಗಿ ಅನಿತಾ ಭಾಸ್ಕರ ನಾಲ್ಕಮನ ಹಾಗೂ ಉಪಾಧ್ಯಕ್ಷರಾಗಿ ಶಾಮಲಾಬಾಯಿ ಚನ್ನಪ್ಪ ಯಂಕಂಚಿ ಆಯ್ಕೆ ಆಗಿದ್ದಾರೆ.
ಅಧ್ಯಕ್ಷ ಸ್ಥಾನ ಅನುಚಿತ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಅ ಮೀಸಲಿದ್ದವು. ಹೀಗಾಗಿ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆಯಾಗಿ ಮಹಿಳಾ ಸದಸ್ಯರಿಬ್ಬರು ಆಯ್ಕೆಯಾಗಿದ್ದು, ತಲಾ 8 ವೋಟ್ ಗಳನ್ನು ಪಡೆದಿದ್ದಾರೆ. ಈ ವೇಳೆ ಇವರನ್ನು ಸದಸ್ಯರು ಶುಭ ಕೋರಿದರು.