ಸಿಂದಗಿಯಲ್ಲಿ ಹೇಗಿದೆ ಮತದಾನ?

162

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಪ್ರಾರಂಭವಾಗಿದೆ. ವಿಜಯಪುರ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಭರ್ಜರಿ ಮತದಾನ ನಡೆಯುತ್ತಿದೆ. ಇದೆ ರೀತಿ ಸಿಂದಗಿ ಕ್ಷೇತ್ರದಲ್ಲಿಯೂ ಮತದಾರರು ತುಂಬಾ ಹುರುಪಿನಿಂದ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಸಿಂದಗಿ ಕಣದಲ್ಲಿ ಒಟ್ಟು 9 ಅಭ್ಯರ್ಥಿಗಳಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಬಿಎಸ್ಪಿ, ಕೆಆರ್ ಎಸ್, ಆಪ್ ಹಾಗೂ ಪಕ್ಷೇತರರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ, ಇಲ್ಲಿರುವುದು ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ನೇರ ಹಣಾಹಣಿ. ಬಿಜೆಪಿಯಿಂದ ರಮೇಶ ಭೂಸನೂರ, ಕಾಂಗ್ರೆಸ್ ನಿಂದ ಅಶೋಕ ಮನಗೂಳಿ ಇದ್ದು. ಇವರಿಬ್ಬರ ನಡುವೆ ಭರ್ಜರಿ ಸ್ಪರ್ಧೆಯಿದೆ.

ಕ್ಷೇತ್ರದಲ್ಲಿ 271 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 17 ಸೂಕ್ಷ್ಮ ಹಾಗೂ 07 ಅತಿ ಸೂಕ್ಷ್ಮ ಮತಗಟ್ಟೆಗಳಿವೆ. ಒಟ್ಟು 2 ಲಕ್ಷದ 31 ಸಾವಿರದ 766 ಮತದಾರರಿದ್ದಾರೆ. ಮೇ 13ಕ್ಕೆ ಫಲಿತಾಂಶ ಹೊರ ಬೀಳಲಿದೆ.




Leave a Reply

Your email address will not be published. Required fields are marked *

error: Content is protected !!