ವಿಧಾನಸಭಾ ಚುನಾವಣೆ: 1,350 ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು

130

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಂಬರುವ 2023ನೇ ಸಾಲಿನ ವಿಧಾನಸಭಾ ಚುನಾವಣೆ ಸಂಬಂಧ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬೇಕೆಂದು ತಿಳಿಸಲಾಗಿತ್ತು. ಅದರಂತೆ ನವೆಂಬರ್ 21 ಕೊನೆಯ ದಿನವಾಗಿತ್ತು. ಅದರಂತೆ ಸಾವಿರಾರು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.

224 ಕ್ಷೇತ್ರಗಳಿಗೆ 1,350 ಕಾಂಗ್ರೆಟ್ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. 5 ಸಾವಿರ ರೂಪಾಯಿ ಅರ್ಜಿ ಶುಲ್ಕ. ಸಾಮಾನ್ಯ ವರ್ಗದವರಿಗೆ 2 ಲಕ್ಷ ರೂಪಾಯಿ ಡಿಮ್ಯಾಂಡ್ ಡ್ರಾಫ್ಟ್, ಎಸ್ಸಿ, ಎಸ್ಟಿ ಅವರಿಗೆ 1 ಲಕ್ಷ ರೂಪಾಯಿ ಪಾವತಿಸಲು ಸೂಚಿಸಲಾಗಿತ್ತು.

1,450 ಅರ್ಜಿಗಳು ಖರೀದಿಯಾಗಿದ್ದು, 1,350 ಅರ್ಜಿಗಳು ಸಲ್ಲಿಕೆಯಾಗಿವೆ. ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅವರು ಕ್ಷೇತ್ರ ಬರೆಯದೆ ಸಲ್ಲಿಸಿದ್ದು, ಇಲ್ಲಿಂದ 6 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಹೈಕಾಂಡ್ ಯಾರಿಗೆ ಯಾವ ಕ್ಷೇತ್ರದ ಟಿಕೆಟ್ ನೀಡುತ್ತೆ ಅನ್ನೋದು ಚುನಾವಣೆ ಹೊತ್ತಿನಲ್ಲಿ ತಿಳಿಯಲಿದೆ.




Leave a Reply

Your email address will not be published. Required fields are marked *

error: Content is protected !!