ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

184

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಲಂಚ, ಮಂಚದ ಸರ್ಕಾರ ಎಂದು ತೀವ್ರ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತಮ್ಮ ಮನೆಯ ಹೆಂಚು ತೂತು ಎಂಬುದೇ ಗೊತ್ತಿಲ್ಲವೆಂದು ತಿರುಗೇಟು ನೀಡಿದೆ. ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದು ಎಂದು ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ ಬಿರಂಗಿ ಬಗ್ಗೆ ಗುಪ್ತ ಸಿಡಿಗಳಿವೆ. ಜೂನಿಯರ್ ಖರ್ಗೆ ಅವರೆ ಸಭ್ಯಸ್ಥರ ಮುಖವಾಡಿ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಯಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದು ತಿರುಗೇಟು ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!