ರಾಜ್ಯ ಉಪ ಚುನಾವಣೆ: 3 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಘೋಷಣೆ

291

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಸಂಬಂಧ ಬಿಜೆಪಿ ತನ್ನ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ. ಬೆಳಗಾವಿ ಲೋಕಸಭೆಗೆ ದಿವಂಗತ ಸುರೇಶ ಅಂಗಡಿ ಪತ್ನಿ ಮಂಗಳಾ ಅಂಗಡಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ನ ಸತೀಶ ಜಾರಕಿಹೊಳಿ ಪ್ರತಿಸ್ಪರ್ಧಿಯಾಗಿ ಮಂಜುಳಾ ಅಂಗಡಿ ಹೆಸರು ಘೋಷಿಸಲಾಗಿದೆ.

ಇನ್ನು ಬಸಕಲ್ಯಾಣ ವಿಧಾನಸಭೆ ಉಪ ಚುನಾವಣೆಗೆ ಶರಣು ಸಲಗಾರಗೆ, ಮಸ್ಕಿಗೆ ಪ್ರತಾಪಗೌಡ ಪಾಟೀಲಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರ ಜೊತೆಗೆ ಕರ್ನಾಟಕ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾಗೆ ತಿರುಪತಿ ಲೋಕಸಭೆಯ ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಘೋಷಿಸಿದೆ.




Leave a Reply

Your email address will not be published. Required fields are marked *

error: Content is protected !!