Search

ರಾಜ್ಯದಲ್ಲಿ ಮಿನಿ ವಾರ್ ಗೆ ಡೇಟ್ ಫಿಕ್ಸ್

354

ನವದೆಹಲಿ: ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಲಾಗಿದೆ. ಮುಖ್ಯ ಚುನಾವಣಾ ಆಯುಕ್ತ ಸುನೀಲ ಅರೋರಾ ಮಾಧ್ಯಮ ಗೋಷ್ಠಿ ನಡೆಸಿ ಚುನಾವಣೆ ದಿನಾಂಕವನ್ನ ಘೋಷಣೆ ಮಾಡಿದ್ದಾರೆ.

ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಅಕ್ಟೋಬರ್ 21ಕ್ಕೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 24ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗದ ಆಯುಕ್ತರು ತಿಳಿಸಿದ್ದಾರೆ. ಅಕ್ಟೋಬರ್ 7 ನಾಮಪತ್ರ ಹಿಂಪಡೆಯುವ ದಿನವಾಗಿದೆ. ಹರಿಯಾಣದ ವಿಧಾನಸಭಾ ಅವಧಿ ನವೆಂಬರ್ 2ಕ್ಕೆ ಮುಗಿಯುತ್ತೆ. ಮಹಾರಾಷ್ಟ್ರದ ಅವಧಿ ನವೆಂಬರ್ 9ಕ್ಕೆ ಮುಗಿಯಲಿದೆ.

ಇನ್ನು ಕರ್ನಾಟಕ, ಬಿಹಾರ, ಅರುಣಾಚಲ ಪ್ರದೇಶ, ಅಸ್ಸಾಂ, ಗುಜರಾತ, ಛತ್ತೀಸಗಡ, ಮೇಘಾಲಯ, ಹಿಮಾಚಲ ಪ್ರದೇಶ, ಕೇರಳ, ಮಧ್ಯಪ್ರದೇಶ, ಒಡಿಶಾ, ಪುದಚೇರಿ, ಪಂಜಾಬ, ರಾಜಸ್ತಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶದ 64 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಕ್ಟೋಬರ್ 21ಕ್ಕೆ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!