ರಾಜ್ಯ ಉಪ ಕದನ: ನಾಳೆ ಗೆಲುವಿನ ಹಾರ ಯಾರಿಗೆ..?

633

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ ಎರಡು ವಿಧಾನಸಭೆ ಹಾಗೂ 1 ಲೋಕಸಭೆ ಸ್ಥಾನಕ್ಕೆ ಏಪ್ರಿಲ್ 17ರಂದು ಚುನಾವಣೆ ನಡೆದಿದೆ. ಮೇ 2, ಭಾನುವಾರ ಫಲಿತಾಂಶ ಬರಲಿದೆ. ಹೀಗಾಗಿ ರಾಜಕೀಯ ನಾಯಕರಲ್ಲಿ ಢವಢವ ಶುರುವಾಗಿದೆ. 10 ಸ್ಥಳೀಯ ಚುನಾವಣೆಯಲ್ಲಿ 7ರಲ್ಲಿ ಕಾಂಗ್ರೆಸ್ 2ರಲ್ಲಿ ಜೆಡಿಎಸ್ ಹಾಗೂ 1 ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಸಹಜವಾಗಿ ಉಪ ಕದನ ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸತೀಶ ಜಾರಕಿಹೊಳಿ ಹಾಗೂ ಬಿಜೆಪಿಯಿಂದ ಮಂಗಳಾ ಅಂಗಡಿ ಸ್ಪರ್ಧಿಸಿದ್ದಾರೆ. ಇಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ನೇರಾನೇರ ಫೈಟ್ ಇದೆ. ಬಸವಕಲ್ಯಾಣ ವಿಧಾನಸಣೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮಾಲಾ ನಾರಾಯಣರಾವ್, ಬಿಜೆಪಿಯಿಂದ ಶರಣು ಸಲಗರ, ಜೆಡಿಎಸ್ ನಿಂದ ಸೈಯದ ಯಾಶ್ರಬ್ ಅಲಿ ಖಾದ್ರಿ ಸ್ಪರ್ಧಿಸಿದ್ದಾರೆ. ಒಟ್ಟು ಇಲ್ಲಿ 12 ಜನ ಕಣದಲ್ಲಿದ್ದಾರೆ.

ಇನ್ನು ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರತಾಪಗೌಡ, ಕಾಂಗ್ರೆಸ್ ನಿಂದ ಆರ್.ಬಸನಗೌಡ ತುರುವಿಹಾಳ ಸ್ಪರ್ಧಿಸಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖೂಬಾ ಸ್ಪರ್ಧಿಸಿದ್ದಾರೆ. ಭಾನುವಾರ ಫಲಿತಾಂಶ ಹೊರ ಬೀಳಲಿದ್ದು ಅಭ್ಯರ್ಥಿಗಳ ಹಣೆಬರಹ ತಿಳಿಯಲಿದೆ.




Leave a Reply

Your email address will not be published. Required fields are marked *

error: Content is protected !!