ಕರ್ನಾಟಕದಲ್ಲಿ ಮೇ 10ಕ್ಕೆ ಮತದಾನ, ಮೇ 13ಕ್ಕೆ ಫಲಿತಾಂಶ

218

ಪ್ರಜಾಸ್ತ್ರ ಸುದ್ದಿ

ದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಿದೆ. ಈ ಮೂಲಕ ಇಷ್ಟು ದಿನಗಳ ಕಾಲ ಮೂಡಿದ್ದ ಕುತೂಹಲಕ್ಕೆ ತೆರೆ ಬಿದ್ದಿದೆ. ಕೇಂದ್ರ ಚುನಾವಣೆ ಆಯುಕ್ತ ಅನೂಪ್ ಚಂದ್ರ ಪಾಂಡೆ, ಅರುಣ್ ಗೊಯಲ್ ಸೇರಿ ಅನೇಕ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಮೇ 10ಕ್ಕೆ ಮತದಾನ, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ದೆಹಲಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ದಿನಾಂಕ ಘೋಷಣೆ ಮಾಡಲಾಯಿತು. ಈಗಾಗ್ಲೇ ನಡೆದ ಚುನಾವಣೆಗಳನ್ನು ಯಶಸ್ವಿಯಾಗಿ ನಡೆಸಿದ್ದು, ಇದೀಗ ಕರ್ನಾಟಕ ಚುನಾವಣೆ ನಮ್ಮ ಮುಂದೆ ಇದೆ. ತುಂಬಾ ಕಟ್ಟುನಿಟ್ಟಾಗಿ ಪಾರದರ್ಶಕವಾಗಿ, ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲಾಗುತ್ತದೆ. ಇದಕ್ಕಾಗಿ ಬೇಕಾದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮೇ 24ಕ್ಕೆ ಎಲ್ಲ ಹಂತದ ಪ್ರಕ್ರಿಯೆಗಳನ್ನು ಮುಗಿಸಲಾಗುತ್ತದೆ. ಯಾಕಂದರೆ, ಮೇ 24ರೊಳಗೆ 15ನೇ ವಿಧಾನಸಭಾ ಅವಧಿ ಮುಗಿಯಲಿದೆ ಎಂದು ಹೇಳಿದರು.

ರಾಜ್ಯದಲ್ಲಿ 5 ಕೋಟಿ 22 ಲಕ್ಷ ಮತದಾರರು ಇದ್ದಾರೆ. ಪುರುಷ 2 ಕೋಟಿ 62 ಲಕ್ಷದ  42 ಸಾವಿರದ 561 ಮತದಾರರು ಇದ್ದಾರೆ. ಮಹಿಳಾ 2 ಕೋಟಿ 59 ಲಕ್ಷದ 26 ಸಾವಿರದ 319 ಮತದಾರರು ಇದ್ದಾರೆ. 4,699 ತೃತೀಯಲಿಂಗಿಗಳು, 12.15 ಲಕ್ಷ ಯುವ ಮತದಾರರು. ಮುಗಿಯಬೇಕು. 80 ವರ್ಷ ದಾಟಿದವರಿಗೆ, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ. 224 ಮತಕ್ಷೇತ್ರಗಳಿಗೆ 58, 282 ಮತಗಟ್ಟೆಗಳನ್ನು ರಾಜ್ಯದಲ್ಲಿ ನಿರ್ಮಾಣ. ಒಂದೊಂದು ಮತಗಟ್ಟೆಗೆ 883 ಮತದಾರರು ಬರುವ ಸಾಧ್ಯತೆ. ಜೇನುಕುರುಬ, ಕಾಡುಕುರುಬ ಮತದಾರರಿಗೆ ಪ್ರತ್ಯೇಕ ಮತದಾನದ ವ್ಯವಸ್ಥೆ. ನಗರ, ಗ್ರಾಮೀಣ ಹಾಗೂ ಗುಡ್ಡಗಾಡು ಪ್ರದೇಶದಲ್ಲಿರುವ ಮತದಾರರು ಸೇರಿ ಎಲ್ಲರನ್ನು ತಲುಪಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಅಂತಾ ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!