ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ರಾಜ್ಯ ಸರ್ಕಾರದ ನೌಕರರಿಗೆ ಕೇಂದ್ರದ ಮಾದರಿ ವೇತನ ಜಾರಿಗೊಳಿಸಲಾಗುವುದು ಎಂದಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-2022 ಕಾರ್ಯಕ್ರಮ ಉದ್ಘಾಟಿಸಿ ಈ ವಿಷಯ ಹೇಳಿದರು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಸಚಿವ ಸಂಪುಟದಿಂದ ಅನುಮೋದನೆ ಕೊಟ್ಟಿದ್ದೇವೆ. ಶೀಘ್ರದಲ್ಲಿ ಜಾರಿಗೊಳಿಸುತ್ತೇವೆ ಎಂದರು.