ದ್ವಿತೀಯ ಪಿಯುಸಿ ಫಲಿತಾಂಶ: ಶೇಕಡ 69.20 ವಿದ್ಯಾರ್ಥಿಗಳು ಪಾಸ್

384

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಬಂದಿದ್ದು, ರಾಜ್ಯದಲ್ಲಿ ಶೇಕಡ 69.20ರಷ್ಟು ಆಗಿದೆ. ಕಳೆದ ವರ್ಷದಂತೆ ಈ ವರ್ಷ ಸಹ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 3,33,985 ಬಾಲಕಿಯರಲ್ಲಿ 2,27,897 ಜನ ಪಾಸ್ ಆಗಿದ್ದಾರೆ. 3,37,668 ವಿದ್ಯಾರ್ಥಿಗಳಲ್ಲಿ 1,86,690 ಜನ ಪಾಸ್ ಆಗಿದ್ದಾರೆ.

ಕಲೆ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೇರಿ ಒಟ್ಟು 6.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಅದರಲ್ಲಿ 4,14,587 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಶೇಕಡ 92.20ರೊಂದಿಗೆ ಉಡುಪಿ ಪ್ರಥಮ ಸ್ಥಾನ, ಶೇಕಡ 51.42ರೊಂದಿಗೆ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.

ಕಲಾ ವಿಭಾಗದಲ್ಲಿ ಶೇಕಡ 50.53, ವಾಣಿಜ್ಯ 66.39 ಹಾಗೂ ವಿಜ್ಞಾನ ವಿಭಾಗದಲ್ಲಿ 66.58 ಶೇಕಡಾವಾರು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆಯಾಗಿ ಕಳೆದ ವರ್ಷಕ್ಕಿಂತ ಸ್ವಲ್ಪ ಏರಿಕೆ ಕಂಡಿದೆ.




Leave a Reply

Your email address will not be published. Required fields are marked *

error: Content is protected !!