ಸೊಲ್ಲಾಪೂರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕು: ಸಿಎಂ ಬೊಮ್ಮಾಯಿ

236

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಡಿಸಿಎಂ ಫಡ್ನಾವಿಸ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿರುವ ಸಿಎಂ ಬೊಮ್ಮಾಯಿ, ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, 2004ರಿಂದಲೂ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರಿಂ ಕೋರ್ಟ್ ನಲ್ಲಿ ದಾವೆ ಹೂಡಿದೆ. ಇದುವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ನಾವು ಕಾನೂನು ಹೋರಾಟವನ್ನು ಪ್ರಬಲವಾಗಿ ಮಾಡಲು ಸನ್ನದ್ದರಾಗಿದ್ದೇವೆ.

ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ ಸೊಲ್ಲಾಪೂರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕು ಅನ್ನೋದು ನಮ್ಮ ಆಗ್ರಹವಿದೆ ಎಂದು ತಿರುಗೇಟು ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!