68 ಸಾಧಕರಿಗೆ, 10 ಸಂಘ-ಸಂಸ್ಥೆಗಳಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

240

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಾಜ್ಯ ಸರ್ಕಾರ ನೀಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ 68 ಸಾಧಕರನ್ನು ಆಯ್ಕೆ ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷೆತೆಯಲ್ಲಿ ಇಂದು ಸಭೆ ನಡೆದಿದೆ. ಈ ವೇಳೆ 68 ಸಾಧಕರಿಗೆ ಹಾಗೂ ಮೈಸೂರು ರಾಜ್ಯವನ್ನು ಕರ್ನಾಟಕವೆಂದು ಮರುನಾಮಕರಣಗೊಂಡು 50 ವರ್ಷ ಪೂರ್ಣಗೊಂಡ ಹಿನ್ನೆಲಯಲ್ಲಿ ನಾಡು, ನುಡಿಗಾಗಿ ಸೇವೆ ಸಲ್ಲಿಸಿದ 10 ಸಂಘ ಸಂಸ್ಥೆಗಳಿಗೆ ಕರ್ನಾಟಕ ಸಂಭ್ರಮ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.

ಪ್ರಶಸ್ತಿಗಾಗಿ ಆನ್ಲೈನ್ ಹಾಗೂ ಆಫ್ ಲೈನ್ ಮೂಲಕ ಒಟ್ಟು 4,500 ಅರ್ಜಿಗಳು ಬಂದಿವೆ. ಸುಮಾರು 23 ಸಾವಿರ ಜನರು ಸೇವಾ ಸಿಂಧು ಪೋರ್ಟಲ್ ಮೂಲಕ 2 ಸಾವಿರ ಮಂದಿ ಸಾಧಕರನ್ನು ಸೂಚಿಸಿದ್ದಾರೆ. ಇದರಲ್ಲಿ 68 ಸಾಧಕರ ಆಯ್ಕೆ ಆಗಿದ್ದು, ಶೀಘ್ರದಲ್ಲಿ ಪಟ್ಟಿ ಬಿಡುಗಡೆಯಾಗಲಿದೆ.

ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಶಿವರಾಜ್ ತಂಗಡಗಿ, ಗೃಹ ಸಚಿವ ಜಿ.ಪರಮೇಶ್ವರ್, ಸಮಾಜ ಕಲ್ಯಾ ಣ ಖಾತೆ ಸಚಿವ ಹೆಚ್.ಸಿ ಮಹಾದೇವಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿಗಳು ಹಾಗೂ ಆಯ್ಕೆ ಸಮಿತಿ ಸದಸ್ಯರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!