ಇಂಗ್ಲಿಷ್ ಭಾಷೆ ಜಾಹೀರಾತು ಹರಿದು ಪ್ರತಿಭಟನೆ

116

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡ ಬಳಸಬೇಕು. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸುತ್ತಿದೆ. ದೇವನಹಳ್ಳಿಯಲ್ಲಿ ಇಂಗ್ಲಿಷ್ ಭಾಷೆಯಲ್ಲಿದ್ದ ಜಾಹೀರಾತು ಹರಿದು ಆಕ್ರೋಶ ವ್ಯಕ್ತಪಡಿಸಲಾಯಿತು.

ದೇವನಹಳ್ಳಿಯ ಸಾದಹಳ್ಳಿ ಟೋಲ್ ಗೇಟ್ ನಿಂದ ಕಬ್ಬನ್ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಪ್ರತಿಯೊಂದು ಅಂಗಡಿ, ಮಾಲ್, ಶಾಲೆ ಸೇರಿದಂತೆ ನಾಮಫಲಕ ಎಲ್ಲೆಲ್ಲಿ ಅಳವಡಿಸಲಾಗಿದೆಯೋ ಅಲ್ಲೆಲ್ಲ ಶೇಕಡ 60ರಷ್ಟು ಕನ್ನಡ ಬಳಸಬೇಕು ಎಂದು ಸರ್ಕಾರದ ಆದೇಶವಿದ್ದು, ಅದನ್ನು ಬಳಸದೆ ಇರುವವ ಅಂಗಡಿಗಳ ಮೇಲೆ ದಾಳಿ ಮಾಡಲಾಗುತ್ತಿದೆ.

ಡಿಸಿಪಿ ಲಕ್ಷ್ಮಿಪ್ರಸಾದ್ ನೇತೃತ್ವದಲ್ಲಿ ಒಬ್ಬರು ಎಸಿಪಿ, 6 ಇನ್ಸ್ ಪೆಕ್ಟರ್, 12 ಸಬ್ ಇನ್ಸ್ ಪೆಕ್ಟರ್, 500ಕ್ಕೂ ಅಧಿಕ ಕಾನ್ಸ್ ಟೇಬಲ್ ಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!