ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಿಂದಗಿ ನೌಕರರ ಸಂಘದಿಂದ ಬೆಂಬಲ

808

ಪ್ರಜಾಸ್ತ್ರ ಸುದ್ದಿ

ಸಿಂದಗಿ: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯಗಳ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಸಂಬಂಧ ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಅದಕ್ಕೆ ಬೆಂಬಲ ನೀಡಲಾಗುತ್ತಿದೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ ತಿಳಿಸಿದ್ದಾರೆ.

ಅಂದು ಕರ್ತವ್ಯಕ್ಕೆ ಗೈರು ಹಾಜರಾಗುವದರೊಂದಿಗೆ ಮುಷ್ಕರಕ್ಕೆ ಬೆಂಬಲ ನೀಡುವ ಮೂಲಕ ಹೋರಾಟ ಯಶಸ್ವಿಗೊಳಿಸಲು ಎಲ್ಲ ಸರ್ಕಾರಿ ನೌಕರರಲ್ಲಿ ಮನವಿ ಮಾಡಿದ್ದಾರೆ. ಜೊತೆಗೆ ಸಂಘದ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ.

ಚುನಾವಣೆ ನೀತಿ ಸಂಹಿತೆ ಜಾರಿಗೂ ಮೊದಲೇ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಶೇಕಡ 40ರಷ್ಟು ಫಿಟ್ ಮೆಂಟ್ ಸೌಲಭ್ಯವು ಜುಲೈ 1, 2022ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಬೇಕು. ಇನ್ನು ಎನ್ ಪಿಎಸ್ ನೌಕರರನ್ನು ಒಪಿಎಸ್ ವ್ಯಾಪ್ತಿಗೆ ತರಬೇಕು. ಪಂಜಾಬ್, ರಾಜಸ್ತಾನ್, ಛತ್ತಿಸಗಡ, ಜಾರ್ಖಂಡ್, ಹಿಮಚಲಪ್ರದೇಶದಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಅದರಂತೆ ರಾಜ್ಯದಲ್ಲಿ ಜಾರಿಗೆ ತರಬೇಕು ಅನ್ನೋ ಬೇಡಿಕೆಗಳನ್ನು ಇಟ್ಟಿದ್ದಾರೆ.

ಈ ವೇಳೆ ಸಂಘದ ಉಪಾಧ್ಯಕ್ಷರಾದ ಎಸ್.ಎಂ ಚಿಗರಿ, ಗಂಗಾಧರ ಸೋಮನಾಯಕ, ಪ್ರಧಾನ ಕಾರ್ಯದರ್ಶಿ ಗಿರಿಧರ ಗತಾಟೆ, ಖಜಾಂಚಿ ಶಿವರಾಜ ಚೌಧರಿ, ರಾಜ್ಯ ಪರಿಷತ್ ಸದಸ್ಯರಾದ ಎಫ್.ಬಿ ಅರಳಿಮುಟ್ಟಿ ಸೇರಿದಂತೆ ಇತರರು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!