ಮಹಿಳಾ ಆಯೋಗದಿಂದ ನಟ ದರ್ಶನಗೆ ನೋಟಿಸ್

132

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಟ ದರ್ಶನ್ ಸಿನಿ ರಂಗಕ್ಕೆ ಬಂದು 25 ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಇತ್ತೀಚೆಗೆ ಡಿ ಪರ್ವ-25 ಸಂಭ್ರಮಾಚರಣೆ ನಡೆಸಲಾಗಿತ್ತು. ಈ ವೇಳೆ ಆಡಿದ ಮಾತುಗಳಿಗೆ ಸಂಬಂಧಿಸಿದಂತೆ ಮಹಿಳಾ ಆಯೋಗದಿಂದ ನೋಟಿಸ್ ನೀಡಲಾಗಿದೆ. 10 ದಿನದೊಳಗಾಗಿ ಉತ್ತರಿಸುವಂತೆ ನೋಟಿಸ್ ಕೊಡಲಾಗಿದೆ.

ಮಹಿಳೆಯರ ಕುರಿತು ವಿವಾದಾತ್ಮಕವಾಗಿ ಮಾತನಾಡಿರುವ ಸಂಬಂಧ ಜಯಶ್ರೀ ಎಂಬುವರು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈಗ ನಟ ದರ್ಶನಗೆ ನೋಟಿಸ್ ಬಂದಿದೆ. ಅಂದು ನಡೆದ ಕಾರ್ಯಕ್ರಮದಲ್ಲಿ ಇವತ್ತು ಇವಳು ಇರ್ತಾಳೆ, ನಾಳೆ ಅವಳು ಬರ್ತಾಳೆ ಎಂದು ಹೇಳಿದ್ದು ವಿವಾದ ಪಡೆದುಕೊಂಡಿದೆ.




Leave a Reply

Your email address will not be published. Required fields are marked *

error: Content is protected !!