ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಷ್ಯಾ ಹಾಗೂ ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಹಾವೇರಿ ಮೂಲದ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಯುದ್ಧದಿಂದಾಗಿ ಸರಿಯಾಗಿ ಅನ್ನ, ನೀರು ಸಿಗದೆ ಜನರು ಒದ್ದಾಡುತ್ತಿದ್ದಾರೆ. ಹಸಿವು ತಾಳಲಾರದೆ ನವೀನ್ ಹೊರಗಡೆ ಆಹಾರ ತರಲು ಹೋಗಿದ್ದಾನೆ. ಈ ವೇಳೆ ರಷ್ಯಾ ನಡೆಸುತ್ತಿದ್ದ ಶೆಲ್ ದಾಳಿಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ನೂರಾರು ವಿದ್ಯಾರ್ಥಿಗಳು ಬಂಕರ್ ನಲ್ಲಿ ಆಶ್ರಯ ಪಡೆದಿದ್ದಾರೆ.