25 ಸಾವಿರ ದಾಟಿದ ಸೋಂಕು.. 400 ದಾಟಿದ ಸಾವು..

324

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು 1,843 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ 25,317 ಜನರಲ್ಲಿ ಕೋವಿಡ್ 19 ವೈರಾಣು ಕಾಣಿಸಿಕೊಂಡಿದೆ. ಇದರಲ್ಲಿ ಇಂದು 680 ಜನ ಗುಣಮುಖರಾಗಿದ್ದು, 10,527 ಜನ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 14,385 ಪ್ರಕರಣಗಳು ಸಕ್ರಿಯವಾಗಿವೆ.

ಕಳೆದ 24 ಗಂಟೆಯಲ್ಲಿ 30 ಜನ ಸಾವನ್ನಪ್ಪುವ ಮೂಲಕ 401ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ 10, ಬೀದರ 8, ಮೈಸೂರು 3, ದಕ್ಷಿಣ ಕನ್ನಡ 2, ಕೊಡಗು, ಹಾಸನ, ಬಳ್ಳಾರಿ, ದಾವಣಗೆರೆ, ತುಮಕೂರು, ಬಾಗಲಕೋಟೆ, ಚಿಕ್ಕಬಳ್ಳಾಪುರದಲ್ಲಿ ತಲಾ 1 ಸಾವು ಸಾಂಭವಿಸಿದೆ.

ಇನ್ನು ಜಿಲ್ಲಾವಾರು ಸೋಂಕಿತರ ನಂಬರ್ಸ್ ಹೀಗಿದೆ..

ಬೆಂಗಳೂರು ನಗರ 981, ಬಳ್ಳಾರಿ 99, ಉತ್ತರ ಕನ್ನಡ 81, ಬೆಂ.ಗ್ರಾಮಾಂತರ 68, ಧಾರವಾಡ 56, ಕಲಬುರಗಿ 53, ಹಾಸನ 49, ಮೈಸೂರು 45, ಬೀದರ 44, ಉಡುಪಿ 40, ಮಂಡ್ಯ 39, ವಿಜಯಪುರ 36, ಯಾದಗಿರಿ 35, ದಕ್ಷಿಣ ಕನ್ನಡ 34, ಬಾಗಲಕೋಟೆ 33, ತುಮಕೂರು 31, ಶಿವಮೊಗ್ಗ 24, ಗದಗ 18, ಚಾಮರಾಜನಗರ 12, ರಾಮನಗರ 11, ಕೋಲಾರ 10, ಹಾವೇರಿ 9, ಕೊಪ್ಪಳ 9, ಚಿಕ್ಕಬಳ್ಳಾಪುರ 7, ರಾಯಚೂರು 6, ಚಿತ್ರದುರ್ಗ 6, ದಾವಣಗೆರಡ 3, ಚಿಕ್ಕಮಗಳೂರು 2, ಕೊಡಗು 2 ಪ್ರಕರಣ ದಾಖಲಾಗಿವೆ.




Leave a Reply

Your email address will not be published. Required fields are marked *

error: Content is protected !!