ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಗೆ ಪ್ರಧಾನಿ ಚಾಲನೆ

222

ಪ್ರಜಾಸ್ತ್ರ ಸುದ್ದಿ

ನವದೆಹಲಿ: ವಿಶ್ವನಾಥ ಮಂದಿರದಿಂದ ಗಂಗಾ ನದಿಗೆ ಸಂಪರ್ಕ ಕಲ್ಪಿಸುವ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಿದರು. 339 ಕೋಟಿ ರೂಪಾಯಿ ವೆಚ್ಚದ ಯೋಜನೆ ಇದಾಗಿದೆ.

ಕಾಶಿ ವಿಶ್ವನಾಥ ಸನ್ನಿಧಿಯಲ್ಲಿ ಪೂಜೆ ಸಲ್ಲಿಸುವುದಕ್ಕೂ ಮೊದಲು ಗಂಗಾ ನದಿಯಲ್ಲಿ ಸ್ನಾನ ಮಾಡಿ ಕಾಲಭೈರವೇಶ್ವರ ದರ್ಶನ ಪಡೆದರು. ಈ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಇತರರು ಸಾಥ್ ನೀಡಿದರು. ಅಲ್ದೇ, ಅಪಾರ ಸಂಖ್ಯೆಯ ಭಕ್ತರು, ವಿವಿಧ ಮಠಗಳ ಮಠಾಧೀಶರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!