ತಮಿಳುನಾಡಿಗೆ ನೀರು, ಮುಂದುವರೆದ ರೈತರ ಪ್ರತಿಭಟನೆ

107

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಮಧ್ಯಂತರ ಆದೇಶದಂತೆ ರಾಜ್ಯ ಸರ್ಕಾರ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದೆ. ಇದನ್ನು ಖಂಡಿಸಿ ರೈತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ಇದು ಮುಂದುವರೆದಿದೆ.

ರೈತರ ಪ್ರತಿಭಟನೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗವಹಿಸಿ ಬೆಂಬಲ ನೀಡಿದರು. ಕೂಡಲೇ ನೀರು ಹರಿಸುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.

ಕಳೆದ ನಾಲ್ಕೈದು ದಿನಗಳಿಂದ ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ರಾಜ್ಯದಲ್ಲಿ ಬರಗಾಲ ಬಿದ್ದಿದೆ. ಹೀಗಿರುವಾಗ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.




Leave a Reply

Your email address will not be published. Required fields are marked *

error: Content is protected !!