ಖರ್ಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ

280

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸೇರಿದಂತೆ ನಾಲ್ವರು ರಾಜ್ಯಸಭೆಯಿಂದ ನಿವೃತ್ತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನ ರಾಜ್ಯಸಭಾ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಭಾಪತಿಗೆ ಪತ್ರ ಬರೆದಿದೆ. ಈ ಮೂಲಕ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಜವಾಬ್ದಾರಿ ಖರ್ಗೆ ಹೆಗಲಿಗೆ ನೀಡಲಾಗ್ತಿದೆ.

ಗುಲಾಂ ನಬಿ ಆಜಾದ್ ಸೇರಿ ನಾಲ್ವರು ರಾಜ್ಯಸಭೆಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಭಾವನಾತ್ಮಕ ಮಾತುಗಳನ್ನ ಆಡಿದ್ರು. ಗುಲಾಂ ನಬಿ ಅವರು ಸಹ ವಿದಾಯದ ಭಾಷಣದಲ್ಲಿ ತಮ್ಮ ಅನುಭವ ಹಂಚಿಕೊಂಡರು.




Leave a Reply

Your email address will not be published. Required fields are marked *

error: Content is protected !!