ಖಿದ್ಮಾ ಕಾವ್ಯ ಪ್ರಶಸ್ತಿಗೆ ಪ್ರೊ.ಫರ್ಹಾನಾಜ್ ಆಯ್ಕೆ

277

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರಿನ ಖಿದ್ಮಾ ಫೌಂಡೇಶನ್ ಕರ್ನಾಟಕ ನೀಡುವ ಖಿದ್ಮಾ ಕಾವ್ಯ ಪ್ರಶಸ್ತಿಗೆ ಪ್ರೊ.ಫರ್ಹಾನಾಜ್ ಆಯ್ಕೆ ಆಗಿದ್ದಾರೆ. ಫೌಂಡೇಶನ್ ನ 4ನೇ ವರ್ಷಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಮಾರ್ಚ್ 5ರಂದು ಧಾರವಾಡದಲ್ಲಿ ಕಾರ್ಯಕ್ರಮ ನಡೆಯಲಿದೆ.

ನೆಲಮಂಗಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಪ್ರೊ.ಫರ್ಹಾನಾಜ್ ಅವರು ಸಾಹಿತ್ಯ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಪತ್ರಿಕೆಗಳಲ್ಲಿ ಲೇಖನಗಳನ್ನು ಸಹ ಬರೆಯುತ್ತಾರೆ. ಮೌನ ಮನದ ಮಾತುಗಳು(ಕವನ ಸಂಕಲನ), ಗಣಿತಾತ್ಮಕ ಅರ್ಥಶಾಸ್ತ್ರ ಅನ್ನೋ ಕೃತಿಗಳು ಸೇರಿ ಹಲವು ಕೃತಿಗಳನ್ನು ಬರೆದಿದ್ದಾರೆ.
Leave a Reply

Your email address will not be published. Required fields are marked *

error: Content is protected !!