ವಿಯಪುರದಲ್ಲಿ ಬಾಲಕಿ ಅಪಹರಣ

136

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಗುಮ್ಮಟನಗರಿ ವಿಜಯಪುರದಲ್ಲಿ 16 ವರ್ಷದ ಬಾಲಕಿಯನ್ನು ಅಪಹರಣ ಮಾಡಲಾಗಿದೆ. ನಗರದ ಜಮಖಂಡಿ ರಸ್ತೆಯಲ್ಲಿರುವ ಶಿವಾನಂದ ಪೆಟ್ರೋಲ್ ಬಂಕ್ ಹತ್ತಿರ ಈ ಘಟನೆ ನಡೆದಿದೆ.

ಫೆಬ್ರವರಿ 12ರ ನಸುಕಿನಜಾವ ಸುಮಾರು 5.30ರ ಹೊತ್ತಿಗೆ ಬಾಲಕಿಯನ್ನು ಅಪಹರಿಸಲಾಗಿದೆ ಎಂದು ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಮಂಗಳವಾರ ಎಸ್ಪಿ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!