ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ: ಸಿಎಂ

462

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಹಿನ್ನೆಲೆಯಲ್ಲಿ ನಗರದಲ್ಲಿರುವ ಚನ್ನಮ್ಮ ಮೂರ್ತಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಲಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದರು.

ಕಿತ್ತೂರು ರಾಣಿ ಚನ್ನಮ್ಮ ಬರೀ ಬೆಳಗಾವಿಗೆ ಮಾತ್ರ ಸಿಮೀತವಲ್ಲ. ಇಡೀ ರಾಜ್ಯಕ್ಕೆ ಸೇರಿದ್ದಾರೆ. ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಆಶೋತ್ತರಗಳನ್ನು ಈಡೇರಿಸುವ ಕೆಲಸ ಸರ್ಕಾರ ಮಾಡಲಿದೆ ಎಂದರು. ಈ ವೇಳೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಮುರುಗೇಶ ನಿರಾಣಿ, ಶಾಸಕ ರಾಜುಗೌಡ ಸೇರಿದಂತೆ ಅನೇಕರಿದ್ದರು.




Leave a Reply

Your email address will not be published. Required fields are marked *

error: Content is protected !!