ಕೋಲಾರ ಜಿ.ಪಂ ಮಾಜಿ ಅಧ್ಯಕ್ಷನ ಹತ್ಯೆ

243

ಪ್ರಜಾಸ್ತ್ರ ಅಪರಾಧ ಸುದ್ದಿ

ಕೋಲಾರ: ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ, ಮಾಜಿ ಸಚಿವ ಕೆ.ಆರ್ ರಮೇಶ್ ಕುಮಾರ್ ಆಪ್ತ ಎಂ.ಶ್ರೀನಿವಾಸನ್ ಎಂಬುವರನ್ನು ಸೋಮವಾರ ಹತ್ಯೆ ಮಾಡಲಾಗಿದೆ. ಶ್ರೀನಿವಾಸಪುರದ ಹೊರವಲಯದ ಹತ್ತಿರ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. 2009ರಲ್ಲಿ ಜೆಡಿಎಸ್ ನಿಂದ ಗೌನಪಲ್ಲಿ ಕ್ಷೇತ್ರದಿಂದ ಸ್ಪರ್ಧಿಸಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿದ್ದರು.

ಕಳೆದ ಐದು ವರ್ಷಗಳ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಬಾರ್ ಕಟ್ಟಡ ಕಾಮಗಾರಿ ವೀಕ್ಷಣೆಗೆ ಹೋಗಿದ್ದಾಗ 6 ಜನ ದುಷ್ಕರ್ಮಿಗಳಿಂದ ದಾಳಿ ನಡೆಸಿ ಕೊಲೆ ಮಾಡಲಾಗಿದೆ. ಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 4 ಪೊಲೀಸ್ ತಂಡಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!