ಎಂಎಲ್ಸಿ ಸ್ಥಾನಕ್ಕೆ ಕೆ.ಪಿ ನಂಜುಂಡಿ ರಾಜೀನಾಮೆ, ನಾಳೆ ಕಾಂಗ್ರೆಸ್ ಸೇರ್ಪಡೆ

56

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ವಿಧಾನ ಪರಿಷತ್ ಬಿಜೆಪಿ ಸದಸ್ಯ ಕೆ.ಪಿ ನಂಜುಂಡಿ ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ಪರಿಷತ್ ಸಭಾಪತಿ ಅವರ ಹುಬ್ಬಳ್ಳಿಯ ಮನೆಗೆ ಇಂದು ಮುಂಜಾನೆ ಭೇಟಿ ನೀಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಇನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಬುಧವಾರ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕೆ.ಪಿ ನಂಜುಂಡಿ, ಬಿಜೆಪಿ ಪಕ್ಷ ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಜವಾಬ್ದಾರಿಗಳನ್ನು ನೀಡಲಿಲ್ಲ. ಇದರಿಂದ ಬೇಸರಗೊಂಡ ಎಂಎಲ್ಸಿ ಸ್ಥಾನಕ್ಕೆ ಹಾಗೂ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದೇನೆ. ನಾಳೆ ಕಾಂಗ್ರೆಸ್ ಸೇರುತ್ತೇನೆ ಎಂದರು.




Leave a Reply

Your email address will not be published. Required fields are marked *

error: Content is protected !!