ಜೂನ್ 7ಕ್ಕೆ ಡಿಕೆಶಿ ಪದಗ್ರಹಣ

312

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೆಪಿಸಿಸಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ ಜೂನ್ 7ರಂದು ಪದಗ್ರಹಣ ಮಾಡಲಿದ್ದಾರೆ. ಈ ಮೂಲಕ ಅಧ್ಯಕ್ಷ ಅಧಿಕಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ಜೂನ್ 7ರಂದು ನಡೆಯಲಿರುವ ಸರಳ ಪದಗ್ರಹಣ ಸಮಾರಂಭದಲ್ಲಿ ಡಿಕೆಶಿಗೆ ದಿನೇಶ ಗುಂಡೂರಾವ ಅವರು, ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಈ ವೇಳೆ ಕಾಂಗ್ರೆಸ್ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ. ತುಂಬಾ ಅದ್ಧೂರಿ ಪದಗ್ರಹಣಕ್ಕೆ ಪ್ಲಾನ್ ಮಾಡಲಾಗಿತ್ತು. ಆದ್ರೆ, ಕರೋನಾದಿಂದಾಗಿ ಸರಳ ಕಾರ್ಯಕ್ರಮ ಮಾಡಲು ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!