ಮಂಡ್ಯದಲ್ಲಿ ಜಿಲ್ಲಾಡಳಿತ ಆದೇಶ ಉಲ್ಲಂಘನೆ

693

ಕೆ ಆರ್ ಪೇಟೆ: ಇಂದು ಬೆಳಗ್ಗೆ ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಲಲಿತಾ ಪೆಟ್ರೋಲ್ ಬಂಕ್ ನಲ್ಲಿ  ಪೆಟ್ರೋಲ್ ಗಾಗಿ ಸಾರ್ವಜನಿಕರು ಮುಗಿಬಿದ್ದ ಘಟನೆ ನಡೆದಿದೆ. ಈ ಮೂಲಕ ಜಿಲ್ಲಾಡಳಿತದ ಆದೇಶ ಉಲ್ಲಂಘಿಸಲಾಗಿದೆ.

ಕೋವಿಡ್-19 ಕೆಲಸದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿ, ಅಧಿಕಾರಿಗಳು ಹಾಗೂ ತಾಲೂಕು ಆಡಳಿತವು ನೀಡಿರುವ ಅಧಿಕೃತ ಪಾಸ್ ಹೊಂದಿರುವವರಿಗೆ ಮಾತ್ರ ಪೆಟ್ರೋಲ್ ಹಾಕಬೇಕು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟವಾದ ಆದೇಶ ನೀಡಿದ್ರೂ ಅದನ್ನ ಉಲ್ಲಂಘಿಸಲಾಗಿದೆ.

ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಲಲಿತಾ ಪೆಟ್ರೋಲ್ ಬಂಕ್ ನಲ್ಲಿ ಇಂದು ಪೊಲೀಸ್ ಅಧಿಕಾರಿಗಳು ಬರುವ ಮುನವೇ ತಮಗಿಷ್ಠ ಬಂದವರ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಹಾಕುವ ಮೂಲಕ ಜಿಲ್ಲಾಧಿಕಾರಿಗಳ ಆದೇಶವನ್ನ  ಗಾಳಿಗೆ ತೂರಿದಂತಾಗಿದೆ.




Leave a Reply

Your email address will not be published. Required fields are marked *

error: Content is protected !!