ಮಾಲಿವುಡ್ ಖ್ಯಾತ ನಿರ್ದೇಶಕ ಸಾವು

286

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಮಲಯಾಳಂನ ಖ್ಯಾತ ನಿರ್ದೇಶಕ ಕೆ.ಆರ್ ಸಚ್ಚಿದಾನಂದನ್ ಗುರುವಾರ ರಾತ್ರಿ ನಿಧನರಾಗಿದ್ದಾರೆ. 48 ವರ್ಷದ ನಿರ್ದೇಶಕ ಸಚ್ಚಿದಾನಂದನ್, ಹೃದಯ ಸ್ತಂಭನವಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳವಾರ ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸಿದೆ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಕೇರಳ ಹೈಕೋರ್ಟ್ ನಲ್ಲಿ ವಕೀಲರಾಗಿದ್ದ ಸಚ್ಚಿದಾನಂದನ್, ನಂತರ ನಿರ್ದೇಶಕನ ಕ್ಯಾಪ್ ತೊಟ್ಟಿದ್ರು.

ರನ್ ಬೇಬಿ ರನ್, ಅಯ್ಯಪ್ಪುನುಂ ಕೋಶಿಯೂಂ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳನ್ನ ನೀಡಿದ್ದಾರೆ. ಕೆ.ಆರ್ ಸಚ್ಚಿದಾನಂದನ್ ನಿಧನಕ್ಕೆ ಮಾಲಿವುಡ್ ಚಿತ್ರರಂಗ ಕಂಬನಿ ಮಿಡಿದಿದೆ.




Leave a Reply

Your email address will not be published. Required fields are marked *

error: Content is protected !!