ಬಸ್ ಪಲ್ಟಿ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

317

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಕೆಎಸ್ಆರ್ ಟಿಸಿ ಬಸ್ಸೊಂದು ಪಲ್ಟಿಯಾಗಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಹತ್ತಿರ ನಡೆದಿದೆ.

ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗಕ್ಕೆ ಹೊರಟಿದ್ದ ವೇಳೆ ಬಸ್ಸಿನ ಪಾಟಾ ಕಟ್ ಆಗಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿ ಹೊಲದಲ್ಲಿ ಪಲ್ಟಿಯಾಗಿದೆ. ಬಸ್ಸಿನಲ್ಲಿ 50ಕ್ಕೂ ಹೆಚ್ಚು ಜನರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳೇ ಇದ್ದರು. ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.




Leave a Reply

Your email address will not be published. Required fields are marked *

error: Content is protected !!