ಗದಗ ಬಳಿ ಭೀಕರ ಅಪಘಾತ: ಐವರ ಸಾವು

352

ಪ್ರಜಾಸ್ತ್ರ ಸುದ್ದಿ

ಗದಗ: ಸಾರಿಗೆ ಸಂಸ್ಥೆ ಬಸ್ ಹಾಗೂ ಟಾಟಾ ಸುಮೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ, ಜಿಲ್ಲೆಯ ನರೇಗಲ್ಲ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಐವರು ಸ್ಥಳದಲ್ಲಿಯೇ ಮೃತಪಟ್ಟರೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗದಗದಿಂದ ಗಜೇಂದ್ರಗಡಕ್ಕೆ ಬಸ್ ಹೊರಟಿತ್ತು. ಕಲಬುರಗಿ ಮೂಲದವರು ಗಜೇಂದ್ರಗಡ ಮಾರ್ಗವಾಗಿ ಶಿರಹಟ್ಟಿ ಫಕ್ಕಿರೇಶ್ವರ ಮಠಕ್ಕೆ ಟಾಟಾ ಸುಮೋದಲ್ಲಿನವರು ಹೊರಟಿದ್ದರು. ಈ ಎರಡು ಗಾಡಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಟಾಟಾ ಸುಮೋದಲ್ಲಿದ್ದವರಿಗೆ ಪ್ರಾಣಿ ಹಾನಿ, ಗಂಭೀರ ಗಾಯಗಳಾಗಿವೆ. ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಕುರಿತು ನರೇಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!