ಹಿಂದಿ ಹೇರಿಕೆ ವಿರುದ್ಧ ಕುಮಾರಸ್ವಾಮಿ ಆಕ್ರೋಶ

142

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ 20 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸುತ್ತಿದೆ. ಪರೀಕ್ಷೆಗೆ ಹಿಂದಿ ಹಾಗೂ ಇಂಗ್ಲಿಷ್ ಮಾತ್ರ ಅವಕಾಶ ನೀಡಿದೆ. ಇದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಿಬಹುದು. ಕನ್ನಡ ಸೇರಿ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಕಿಡಿ ಕಾರಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಅನ್ನೋ ಕೆಟ್ಟ ಹಠವಿದ್ದಂತ ಇದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಮಾಡಿ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ ಎಂದು ಸಾಲು ಸಾಲು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!