ಹೆಣ್ಮಕ್ಕಳು ದಾರಿತಪ್ಪುತ್ತಿದ್ದಾರೆ ಹೇಳಿಕೆ, ಹೆಚ್ಡಿಕೆ ವಿರುದ್ಧ ಕೇಸ್

75

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಮಕ್ಕಳು ದಾರಿತಪ್ಪುತ್ತಿದ್ದಾರೆ ಎನ್ನುವ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ವಿರುದ್ಧ ಕೇಸ್ ದಾಖಲಿಸಲಾಗಿದೆ.

ರಾಜ್ಯ ಮಹಿಳಾ ಆಯೋಗ ಕುಮಾರಸ್ವಾಮಿ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿದ್ದು, ನೋಟಿಸ್ ಜಾರಿ ಮಾಡಲಿದೆ. ಈ ರೀತಿ ಹೇಳಿಕೆ ನೀಡುವ ಮೂಲಕ ಮಹಿಳೆಯರ ಘನತೆ, ಚಾರಿತ್ರ್ಯಗೆ ಧಕ್ಕೆ ತಂದಿದ್ದಾರೆ ಎಂದು ಹೇಳಲಾಗಿದೆ.

ತುಮಕೂರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ತುರುವೇಕೆರೆಯಲ್ಲಿ ಮತಯಾಚನೆ ಮಾಡುವ ಸಂದರ್ಭದಲ್ಲಿ, ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ ಎಂದಿದ್ದಾರೆ. ಇದಕ್ಕೆ ಎಲ್ಲಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ನಾನು ಮಹಿಳೆಯರಿಗೆ ಅಪಮಾನ ಮಾಡಿಲ್ಲ. ಗ್ಯಾರಂಟಿ ಹೆಸರಿನಲ್ಲಿ ಮಹಿಳೆಯರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದೇನೆ ಅಂತಾ ಕುಮಾರಸ್ವಾಮಿ ಸಮಜಾಯಿಷಿ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!