ಬಿಜೆಪಿ ಮಹಿಳಾ ಪ್ರಧಾನ ಕಾರ್ಯದರ್ಶಿಯಾಗಿದ್ದ ವಕೀಲೆಗೆ ಜಡ್ಜ್ ಸ್ಥಾನ: ಸುಪ್ರೀಂಗೆ ಅರ್ಜಿ

152

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಮಹಿಳಾ ಪ್ರಧಾನ ಕಾರ್ಯದರ್ಶಿಯಾಗಿದ್ದ ವಕೀಲೆಗೆ ಮದ್ರಾಸ್ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ವಕೀಲೆ ಲಕ್ಷ್ಮಣಚಂದ್ರ ವಿಕ್ಟೋರಿಯಾ ಗೌರಿ ಅವರನ್ನು ಜಡ್ಜ್ ಆಗಿ ನೇಮಕ ಮಾಡಲಾಗಿದ್ದು, ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ಮದ್ರಾಸ್ ಹೈಕೋರ್ಟ್ ವಕೀಲ ರಾಜು ರಾಮಚಂದ್ರನ್ ಸೇರಿ ಹಲವರು ಅರ್ಜಿ ಸಲ್ಲಿಸಿದ್ದಾರೆ. ಇದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಹೀಗಾಗಿ ಫೆಬ್ರವರಿ 10ಕ್ಕೆ ನಿಗದಿಯಾಗಿದ್ದ ವಿಚಾರಣೆಯನ್ನು ಇಂದೆ ನಡೆಸಲಾಗುತ್ತಿದೆ.

ಕೇಂದ್ರ ಸರ್ಕಾರದ ಈ ನಡೆಯನ್ನು ಹಲವರು ವಿರೋಧಿಸಿದ್ದಾರೆ. ಬಿಜೆಪಿ ಪರ ಪ್ರಚಾರ ನಡೆಸಿದ್ದ, ಇಸ್ಲಿಂಗಿಂತ ಕ್ರಿಶ್ಚಿಯನ್ ಧರ್ಮದಿಂದ ಭಾರತಕ್ಕೆ ಗಂಡಾಂತರವಿದೆ ಎಂದು ಹೇಳಿರುವುದು ಸೇರಿದಂತೆ ಬಿಜೆಪಿಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ವಕೀಲೆಗೆ ಹೆಚ್ಚುವರಿ ಜಡ್ಜ್ ಆಗಿ ನೇಮಿಸಿದ್ದು, ತೀವ್ರ ವಿರೋಧಕ್ಕೆ ಕಾರಣವಾಗಿದೆ.




Leave a Reply

Your email address will not be published. Required fields are marked *

error: Content is protected !!