ಲಕ್ಷ್ಮಣ ಸವದಿಯ ಆಪ್ತನ ಹತ್ಯೆ

82

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಳಗಾವಿ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.

ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಶಾಸಕರಾದ ಲಕ್ಷ್ಮಣ ಸವದಿ, ರಾಜು ಕಾಗೆ ಅವರ ಬಳಗದಲ್ಲಿ ಗುರುತಿಸಿಕೊಂಡಿದ್ದರು.

ಹಣಕಾಸಿನ ಕಾರಣಕ್ಕೆ ಕೊಲೆ ನಡೆದಿರಬಹುದು ಅನ್ನೋ ಶಂಕೆ ವ್ಯಕ್ತವಾಗಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಯ ತನಿಖೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!