ಗಾನ ಕೋಗಿಲೆ ಆಸ್ಪತ್ರೆಗೆ ದಾಖಲು

386

ಮುಂಬೈ: ಖ್ಯಾತ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಲತಾ ಮಂಗೇಶ್ಕರ್ ಅವರನ್ನ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಬೆಳಗ್ಗೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದ ಕುರಿತು ವೈದ್ಯರು ಇನ್ನು ಯಾವುದೇ ರೀತಿಯ ಮಾಹಿತಿಯನ್ನ ಬಿಡುಗಡೆ ಮಾಡಿಲ್ಲ. ಸೆಪ್ಟೆಂಬರ್ ನಲ್ಲಿ ತಮ್ಮ ಹುಟ್ಟು ಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಸಾವಿರಾರು ಹಾಡುಗಳಿಗೆ ದನಿ ನೀಡಿದ ಹಿರಿಯ ಗಾಯಕಿ, ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿಯೂ ತುಂಬಾ ಆ್ಯಕ್ಟೀವ್ ಆಗಿದ್ರು.




Leave a Reply

Your email address will not be published. Required fields are marked *

error: Content is protected !!