ಪಬ್ ಪ್ರಕರಣ: ದರ್ಶನ್ ಸೇರಿ 8 ಮಂದಿಗೆ ಕ್ಲೀನ್ ಚಿಟ್

101

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕಾಟೇರ ಚಿತ್ರದ ಸಕ್ಸಸ್ ಪಾರ್ಟಿ ವಿಚಾರವಾಗಿ ನಟ ದರ್ಶನ್ ಸೇರಿ 8 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಕ್ಲೀನ್ ಚಿಟ್ ಸಿಕ್ಕಿದ್ದು, ಎಲ್ಲರಿಗೂ ಬಿಗ್ ರಿಲೀಫ್ ಸಿಕ್ಕಿದೆ.

ರಾಜಾಜಿನಗರದಲ್ಲಿನ ಜೆಟ್ ಲ್ಯಾಗ್ ಪಬ್ ನಲ್ಲಿ ಅವಧಿ ಮೀರಿ ಬೆಳಗಿನಜಾವದ ತನಕ ಪಾರ್ಟಿ ಮಾಡಲಾಗಿದೆ ಎಂದು ನಟರಾದ ದರ್ಶನ್, ನೀನಾಸಂ ಸತೀಶ್, ಚಿಕ್ಕಣ್ಣ, ಅಭಿಷೇಕ್ ಅಂಬರೀಶ್, ಡಾಲಿ ಧನಂಜಯ್, ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹಾಗೂ ಪಬ್ ಮಾಲೀಕರು, ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಆರೋಪಿಗಳು ಊಟದ ಪಾರ್ಟಿ ಮಾಡಿದ್ದಾರೆ. ತಡರಾತ್ರಿವರೆಗೂ ಮದ್ಯದ ಪಾರ್ಟಿ ಮಾಡಿಲ್ಲ ಎಂದಿದ್ದಾರೆ. ಈ ಪ್ರಕರಣ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಎಲ್ಲರು ಬಂದು ಹೇಳಿಕೆ ನೀಡಿದ್ದರು.




Leave a Reply

Your email address will not be published. Required fields are marked *

error: Content is protected !!